ಟೀಕಾಕಾರರ ಬಗ್ಗೆ ದೇವೇಗೌಡ ಗರಂ; ಕೈ ನಾಯಕರ ವಿರುದ್ಧವೂ ವಾಗ್ದಾಳಿ

ಬೆಂಗಳೂರು: ಯಾರು ಏನೇ ಮಾಡಿದರೂ ಜೆಡಿಎಸ್ ಪಕ್ಷವನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ .ಡಿ ದೇವೇಗೌಡರು ತಮ್ಮ ವಿರುದ್ದದ ಟೀಕಾಕಾರರಿಗೆ ಸವಾಲು ಹಾಕಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡ, ಕುಮಾರಸ್ವಾಮಿಯ ಹೊರತಾಗಿಯೂ ಪಕ್ಷದಲ್ಲಿ ಸಾಕಷ್ಟು ನಾಯಕರಿದ್ದಾರೆ. ಪಕ್ಷ ಯಾರೊಬ್ಬರನ್ನೂ ನೆಚ್ಚಿಕೊಂಡಿಲ್ಲ ಎಂದರು.  ಪಕ್ಷದ ಬಗ್ಗೆ ಹಲವಾರು ರೀತಿ ವ್ಯಾಖ್ಯಾನ ನಡೆಯುತ್ತಿದ್ದು, ಅದನ್ನು ಮನರಂಜನೆ ಕಾರ್ಯಕ್ರಮ ಎಂದು ಹೇಳಬಹುದು ಎಂದ ಅವರು ಬಿಜೆಪಿ-ಜೆಡಿಎಸ್ ವಿಲೀನ ಸುದ್ದಿಯನ್ನು ತಳ್ಳಿಹಾಕಿದರು.

ಪ್ರಾದೇಶಿಕ ಪಕ್ಷ ಉಳಿಸಿಕೊಳ್ಳಲು ಎಷ್ಟು ಕಷ್ಟ ಎನ್ನುವುದು ಆ ಪಕ್ಷದ ಮುಖ್ಯಸ್ಥರಿಗೆ ಗೊತ್ತಿರುತ್ತದೆ ಎಂದ ದೇವೇಗೌಡರು, ಜೆಡಿಎಸ್ ಪಕ್ಷಕ್ಕೆ ಹಾನಿ ಮಾಡಲು ಯಾರಿಗೂ ಸಾಧ್ಯವಿಲ್ಲ ಎಂದ ಅವರು, ಹಾಲು, ಅಕ್ಕಿ ಭಾಗ್ಯದ ಮೇಲೆ ಭಾಗ್ಯ ಕೊಟ್ಟವರು ಏನಾದರು? 130 ಸೀಟು ಇದ್ದದ್ದು 78ಕ್ಕೆ ಏಕೆ ಬಂತು? ಹಾಸನದಲ್ಲಿ ಈಗ ಕಾಂಗ್ರೆಸ್ ಏನಾಗಿದೆ? ಒಂದು ನಗರಸಭೆ ಚುನಾವಣೆ ಗೆಲ್ಲಲು ಆಗಲಿಲ್ಲ, ಇದು ಆನಂದವಾ ನಿಮಗೆ? ಎಲ್ಲದಕ್ಕೂ ತೆರೆ ಎಳೆಯುತ್ತಿದ್ದೇನೆ ಎಂದು ಕೈ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

Related posts