ಹುಬ್ಬಳ್ಳಿ ರೈಲು ನಿಲ್ದಾಣ ಇನ್ನು ‘ಶ್ರೀ ಸಿದ್ಧಾರೂಢ ಸ್ವಾಮೀಜಿ’ ನಿಲ್ದಾಣ

ಹುಬ್ಬಳ್ಳಿ: ನೈಋತ್ಯ ರೈಲ್ವೆ ವಲಯದ ಕೇಂದ್ರ ಸ್ಥಾನ ಹುಬ್ಬಳ್ಳಿಯ ರೈಲು ನಿಲ್ದಾಣಕ್ಕೆ ಶ್ರೀ ಸಿದ್ಧಾರೂಢ ಸ್ವಾಮೀಜಿಯವರ ಹೆಸರಿಡಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ.

ಹುಬ್ಬಳ್ಳಿ ರೈಲ್ವೆ ನಿಲ್ದಾಣವನ್ನು “ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣ-ಹುಬ್ಬಳ್ಳಿ” ಎಂದು ನಾಮಕರಣ ಮಾಡುವ ಮುಖಾಂತರ ಉತ್ತರ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರಿದೆ.

ಕೇಂದ್ರ ಸರ್ಕಾರದ ಈ ಕ್ರಮವನ್ನು ಹುಬ್ಬಳ್ಳಿಯ ಜನತೆ ಸ್ವಾಗತಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರಿಗೆ, ಗೃಹ ಸಚಿವರಾದ ಅಮಿತ್ ಶಾ ರವರಿಗೆ, ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯಲ್ ಹಾಗೂ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Related posts