‘ನಾವಿಬ್ಬರೂ ಒಂದೇ ನಾಣ್ಯದ ಎರಡು ಮುಖ’; ಗಣೇಶ್ ಬಗ್ಗೆ ಜಗ್ಗೇಶ್ ಟ್ವೀಟ್

ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್‍ 40ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಕನ್ನಡ ಸಿನಿಮಾ ರಂಗದ ಪ್ರಮುಖರು, ಅಭಿಮಾನಿಗಳು ನಟ ಗಣೇಶ್’ಗೆ ಶುಭ ಹಾರೈಸಿದ್ದಾರೆ.

ಹಲವಾರು ನಟ ನಟಿಯರು ಸಾಮಾಜಿಕ ಜಾಲತಾಣಗಳಲಿಲಿ ತಮ್ಮದೇ ಶೈಲಿಯಲ್ಲಿ ಶುಭಾಶಯಗಳನ್ನು ಹರಿಯಬಿಟ್ಟಿದ್ದಾರೆ. ಈ ಪೈಕಿ ನಟ ಜಗ್ಗೇಶ್ ಮಾಡಿರುವ ಟ್ವೀಟ್ ಗಮನಸೆಳೆದಿದೆ.

‘ನಾವಿಬ್ಬರೂ ಒಂದೇ ನಾಣ್ಯದ ಎರಡು ಮುಖ’ ಎಂದಿರುವ ಜಗ್ಗೇಶ್, ನಮಗಿಬ್ಬರಿಗೂ ಪ್ರತಿಭೆಯೇ ಗಾಡ್ ಫಾದರ್! ನನ್ನಂತೆ ಇವನಿಗೂ ಜೋತಿಷ್ಯಾಸ್ತ್ರ ಇಷ್ಟದ ವಿಷಯ! ನನ್ನಂತೆ ಅಳೆದು ತೂಗಿ ಜನಸೇರುತ್ತಾನೆ! ನನ್ನಂತೆ ಮೇಲೆ ನಗು ಒಳಗೆ ಒಬ್ಬನೆ ಜೀವಿಸುತ್ತಾನೆ! ನಮ್ಮಿಬ್ಬರನ್ನು ಅನ್ಯರು ಯಾಮಾರಿಸಲು ಸ್ವಲ್ಪಕಷ್ಟ! ಕಾರಣ ರಸ್ತೆಯಿಂದ ಬಂದವರು! ಎಂದು ಟ್ವೀಟ್ ಮಾಡಿದ್ದಾರೆ.

 

Related posts