ಸರ್ಕಾರದ ವೈಫಲ್ಯ ವಿರುದ್ಧ ಹೋರಾಟಕ್ಕೆ ಜೆಡಿಎಸ್ ರಣತಂತ್ರ

ಬೆಂಗಳೂರು: ಪಕ್ಷ ಸಂಘಟನೆ, ರಾಜ್ಯ ಸರ್ಕಾರದ ವೈಫಲ್ಯ ವಿರುದ್ಧ ಹೋರಾಟಕ್ಕೆ ಜೆಡಿಎಸ್ ಸಜ್ಜಾಗುತ್ತಿದೆ. ಇದಕ್ಕಾಗಿ ಪಕ್ಷದ ಪ್ರಮುಖರು ರಣತಂತ್ರ ರೂಪಿಸುತ್ತಿದ್ದಾರೆ. ಈ ಸಂಬಂಧ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಹಿತ ಜೆಡಿಎಸ್ ಪ್ರಮುಖರು ಶನಿವಾರ ನಡೆಸಿದ ವೀಡಿಯೋ ಕಾನ್ಫರೆನ್ಸ್ ಸಭೆ ಗಮನಸೆಳೆಯಿತು.

ಮಂಡ್ಯ, ಮೈಸೂರು, ಹಾಸನ, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಗಳ ಜೆಡಿಎಸ್ ಜಿಲ್ಲಾಧ್ಯಕ್ಷರು, ಶಾಸಕರು, ತಾಲೂಕು ಅಧ್ಯಕ್ಷರು ಮತ್ತು ಕಳೆದ ಬಾರಿಯ ಪರಾಜಿತ ಅಭ್ಯರ್ಥಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು.

ಕರ್ನಾಟಕ ರಾಜ್ಯದ ಬಹುತೇಕ ಜಿಲ್ಲೆಗಳು ಕಳೆದ ಎರಡು ವರ್ಷಗಳಿಂದ ನೆರೆ ಹಾವಳಿಯಿಂದ ತತ್ತರಿಸಿದ್ದು ಸರ್ಕಾರವು ನೊಂದವರಿಗೆ ಅಗತ್ಯ ನೆರವು ಹಾಗೂ ಸೌಲಭ್ಯ ಕಲ್ಪಿಸುವುದರಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು ಕೊರೊನಾದ ಇಂತಹ‌ ಸಂದರ್ಭದಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ‌ ನೀಡಿ ವಸ್ತು ಸ್ಥಿತಿ ಯನ್ನು ಅರಿಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಈ ವೀಡಿಯೋ ಸಂವಾದವನ್ನು ಏರ್ಪಡಿಸಲಾಗಿತ್ತು ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

Related posts