ಮಗು ಲಾಕಪ್ ಡೆತ್; ಪಿಎಸ್ಐ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಅಹೋರಾತ್ರಿ ಪ್ರತಿಭಟನೆ

ಕಲಬುರ್ಗಿ: ಪೊಲೀಸ್ ವಶದಲ್ಲಿದ್ದಾಗ ಮಗು ಸಾವನ್ನಪಿದೆ ಎನ್ನಲಾದ ಪ್ರಕರಣ ಇದೀಗ ವಿವಾದದ ಬಿರುಗಾಳಿಯನ್ನೇ ಎಬ್ಬಿಸಿದೆ. ಕಲಬುರ್ಗಿ ಕಾರಾಗೃಹದಲ್ಲಿ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪೋಷಕರು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ.

ಜೇವರ್ಗಿ ಸಮೀಪದ ಜೈನಾಪುರದಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳ ಬೆಂಬಲಿಗರೆನ್ನಲಾದ ಗುಂಪು ಸೋತ ಅಭ್ಯರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆನ್ನಲಾಗಿದೆ. ಈ ಪ್ರಕರಣ ಸಂಬಂಧ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದರು. ಈ ವೇಳೆ ತಾಯಿ ಜೊತೆಗಿದ್ದ ಮಗು ಸಾವನಪ್ಪಿದೆ.

ಲೀಸಾರು ಹಲ್ಲೆ ನಡೆಸಿದ್ದರಿಂದ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸಿದರು. ಕಲಬುರ್ಗಿಯಲ್ಲಿ ರಸ್ತೆಯಲ್ಲಿ ಮಗುವಿನ ಶವ ಇಟ್ಟು ಆಹೋರಾತ್ರಿ ಪ್ರತಿಭಟನೆ ನಡೆಸಿದ ಸಾರ್ವಜನಿಕರು ಪಿಎಸ್ಐ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

Related posts