ರಾಜ್ಯದಲ್ಲಿ ಮತ್ತೆ ಮಳೆ ಸಾಧ್ಯತೆ; ಈ ವಾರಾಂತ್ಯವರೆಗೂ ಮೋಡ ಕವಿದ ವಾತಾವರಣ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ತೀವ್ರವಾದ ಹಿನ್ನೆೆಲೆಯಲ್ಲಿ ರಾಜ್ಯದ ವಿವಿಧೆಡೆ ತುಂತುರು ಮಳೆಯಾಗುತ್ತಿದ್ದು , ಜ.9ರ ವರೆಗೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು: ರಾಜ್ಯದ ದಕ್ಷಿಣಒಳನಾಡಿನಳ್ಳಿ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರು ಸಹಿತ ರಾಜ್ಯವ್ಯಾಪಿ ಮೋಡಕವಿದ ವಾತಾವರಣ ಕಂಡುಬಂದರೆ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇನ್ನೆರಡು ದಿನಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. 64.5 ಮಿ.ಮೀನಿಂದ 115.5 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು ಈ ಹಿನ್ನೆಲೆಯಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

ಈ ವಾರಾಂತ್ಯದವರೆಗೂ ಅಂದರೆ, ಜ.9ರ ವರೆಗೆ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕರಾವಳಿ ಸಹಿತ ಅಲ್ಲಲ್ಲಿ ತುಂತುರು ಮಳೆಯಾಗಲಿದೆ. ಚಳಿಯ ವಾತವರಣ ಇರಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

Related posts