ಸಂಡೆ ಲಾಕ್’ಡೌನ್; ಕರ್ನಾಟಕ ಪೂರ್ತಿ ಬಂದ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹಾವಳಿ ಮುಂದುವರಿದಿರುವ ಹಿನ್ನೆಲೆಯಲ್ಲಿ ಸಂಡೆ ಲಾಕ್’ಡೌನ್ ಜಾರಿಯಲ್ಲಿದೆ. ಕಳೆದ ವಾರದಿಂದ ಈ ಸಂಡೆ ಕರ್ಫ್ಯೂ ಜಾರಿಯಲ್ಲಿದ್ದು, ಈ ಭಾನುವಾರವೂ ರಾಜ್ಯದ ಎಲ್ಲೆಡೆ ಬಂದ್ ವಾತಾವರಣ ಕಂಡುಬರುತ್ತಿದೆ.

ರಾಜಧಾನಿ ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ, ಕಲಬುರಗಿ ಸೇರಿದಂತೆ ಬಹುತೇಕ ನಗರಗಳು ನಿತ್ಯದ ಚಟುವಟಿಕೆಗಳಿಂದ ದೂರವಿದೆ.

ಬೆಂಗಳೂರಿನಲ್ಲಿ ಬಿಎಂಟಿಸಿ, ಕೆಸ್ಸಾರ್ಟಿಸಿ ಸಹಿತ ಸಾರಿಗೆ ಬಸ್ಸುಗಳ ಹಾಗೂ ಸಾರಿಗೆ ವಾಹನಗಳ ಸಂಚಾರ ಸ್ಥಗಿತಗೊಂಡಿದೆ. ಅಗತ್ಯ ವಸ್ತುಗಳ ಸೇವೆಗಷ್ಟೇ ಅವಕಾಶವಿದೆ.

Related posts