ಕರುನಾಡಲ್ಲಿ ಕೊರೋನಾ ಆರ್ಭಟ; ಒಂದೇ ದಿನ 9058 ಮಂದಿಯಲ್ಲಿ ಸೋಂಕು

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಹೆಮ್ಮಾರಿಯ ಆರ್ಭಟ ಜೋರಾಗಿದೆ. ಮಂಗಳವಾರ ಬರೋಬ್ಬರಿ 9058 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಬೆಂಗಳೂರು ನಗರವೊಂದರಲ್ಲೇ 2967 ಹೊಸ ಪ್ರಕರಣಗಳು ವರದಿಯಾಗಿದೆ.

ಆರೋಗ್ಯ ಇಲಾಖೆ ಹೊರಡಿಸಿರುವ ಪ್ರಕಟಣೆ ಈ ಕುರಿತ ಮಾಹಿತಿಯನ್ನು ಬಹಿರಂಗಪಡಿಸಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,51481ಕ್ಕೆ ಏರಿಕೆಯಾಗಿದೆ.

ಈ ನಡುವೆ, ಸೋಮವಾರ ಸಂಜೆಯಿಂದ ಮಂಗಳವಾರ ಸಂಜೆವರೆಗೆ ರಾಜ್ಯದಲ್ಲಿ 135 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5837ಕ್ಕೆ ಏರಿಕೆಯಾಗಿದೆ.

Related posts