ಕೊರೋನಾ ಹೆಚ್ಚಿರುವ ಜಿಲ್ಲೆಗಳಲ್ಲೂ ಲಾಕ್’ಡೌನ್; ಸರ್ಕಾರದ ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಾಣು ಹಾವಳಿಯಿಂದಾಗಿ ಜನ ಭಯಭೀತರಾಗಿದ್ದಾರೆ. ಅದರಲ್ಲೂ ಬೆಂಗಳೂರಿನಲ್ಲಿ ಪರಿಸ್ಥಿತಿ ಇಯಂತ್ರಿಸಲು ಹರಸಾಹಸಪಡುತ್ತಿರುವ ಸರ್ಕಾರ ಬುಧವಾರದಿಂದ ಲಾಕ್‌ಡೌನ್ ಜಾರಿಗೆ ನಿರ್ಧರಿಸಿದೆ.

ಈ ಲಾಕ್ ಡೌನ್ ಹಿನ್ನೆಲೆಯಲ್ಲಿ ಸೋಮವಾರ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ 7 ದಿನ ಮಾತ್ರ ಲಾಕ್‌ಡೌನ್ ಜಾರಿಯಲ್ಲಿರುತ್ತದೆ. ಆದರೆ ಈ ಸಂದರ್ಭದಲ್ಲಿ ಜನರು ಅನಗತ್ಯವಾಗಿ ಮನೆಯಿಂದ ಹೊರಬಾರದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ರಾಜ್ಯದ 12 ಜಿಲ್ಲೆಗಳಲ್ಲಿ ಕೊರೋನಾ ಸೋಂಕು ತೀವ್ರಗತಿಯಲ್ಲಿ ಹೆಚ್ಚುತ್ತಿದ್ದು ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲೂ ಲಾಕ್‌ಡೌನ್ ಜಾರಿ ಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಅಶೋಕ್ ತಿಳಿಸಿದರು.

Related posts