ಯುವ ಕಾಂಗ್ರೆಸ್ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಚಾಲನೆ

ಬೆಂಗಳೂರು: ಯುವ ಕಾಂಗ್ರೆಸ್ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಚಾಲನೆ ಸಿಕ್ಕಿದೆ. ‌ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ಅವರು ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಯುವ‌ ಕಾಂಗ್ರೆಸ್ ಕಾಂಗ್ರೆಸ್ ಪಕ್ಷದ ಆಧಾರಸ್ತಂಭ. ಸುಭಧ್ರ ರಾಷ್ಟ್ರ ಹಾಗೂ ಜ್ಯಾತ್ಯಾತೀತ ಸಮಾಜ ನಿರ್ಮಾಣ ಯುವಕರಿಂದ ಮಾತ್ರ ‌ಸಾಧ್ಯ ಎಂದರು. 60 ವರ್ಷಗಳ ಇತಿಹಾಸ‌ವಿರುವ‌ ಯುವ‌ ಕಾಂಗ್ರೆಸ್ ಪ್ರಪಂಚದ ಅತಿದೊಡ್ಡ ಬಲಿಷ್ಠ ಯುವ ಸಂಘಟನೆಯಾಗಿದೆ. ದೇಶದ ಅಭಿವೃದ್ಧಿ ಗೆ ಅಪಾರ ಕೊಡುಗೆ ನೀಡಿದೆ ಎಂದವರು ಹೇಳಿದರು.

ಮುಂದಿನ ದಿನಗಳಲ್ಲಿ ಕೆಪಿಸಿಸಿ ವತಿಯಿಂದ ಯುವಕಾಂಗ್ರೆಸ್ ಗೆ ಪ್ರತ್ಯೇಕ ತರಬೇತಿ ನೀಡುವುದರ ಜೊತೆಗೆ each booth 5 Youth ಎಂಬ ವಿನೂತ ಕಾರ್ಯಕ್ರಮ ಹಮ್ಮಿಕೊಳ್ಳಲಿದೆ ಎಂದು ಸಲೀಂ ಅಹಮದ್ ತಿಳಿಸಿದರು.

ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರನ್ನು ಸುಳ್ಳಿನ ಸರದಾರ ಎಂದು ಬಣ್ಣಿಸಿದ ಅವರು, ಪ್ರತಿವರ್ಷ 2 ಕೋಟಿ ಉದ್ಯೋಗ ನೀಡುತ್ತೇವೆಂದು ಭರವಸೆ ನೀಡಿದ್ದರು. ಕಳೆದ 6 ವರ್ಷಗಳಲ್ಲಿ 12 ಕೋಟಿ ಉದ್ಯೋಗ ನೀಡಬೇಕಾಗಿತ್ತು. ಕನಿಷ್ಠ 12 ಲಕ್ಷ ಉದ್ಯೋಗ ಕೂಡ ನೀಡಿಲ್ಲ. ಮೋದಿ ಸರ್ಕಾರ ಯುವಕರಿಗೆ ಸುಳ್ಳು ಅಶ್ವಾಸನೆ ನೀಡುವ ಮೂಲಕ ಯುವಕರಿಗೆ ಉದ್ಯೋಗ ನೀಡದೆ ಪಕೋಡಮಾರಿ ಜೀವನ ಮಾಡಿ ಹೇಳಿಕೆ ನೀಡಿ ಮೋಸ‌ ಮಾಡಿದ್ದಾರೆ ಎಂದು ದೂರಿದರು.

ಅಖಿಲ ಭಾರತ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಶ್ರೀ ಅನಿಲ್ ಯಾದವ್, ಚುನಾವಣಾ ಪಿಆರ್ ಒ ಡಾ.ರಾಮಾಜಿ ಉಪಸ್ಥಿತರಿದ್ದರು

Related posts