ಡಿಜಿಟಲ್ ಕಲಿಕೆಗೆ ಒತ್ತು; ನೀದೇಶದಲ್ಲಿಯೇ ಮೊದಲ ಬಾರಿ ಎಲ್.ಎಂ.ಎಸ್ ಕಾರ್ಯಕ್ರಮ

ಬೆಂಗಳೂರು: ಡಿಜಿಟಲ್ ಕಲಿಕೆಗೆ ಒತ್ತು ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದೇಶದಲ್ಲಿಯೇ ಮೊದಲ ಬಾರಿ ಜಾರಿಗೊಳಿಸಿರುವ ಕರ್ನಾಟಕ ಎಲ್ ಎಂ ಎಸ್ ಕಾರ್ಯಕ್ರಮದಿಂದ ಸಮಗ್ರ ಉನ್ನತ ಶಿಕ್ಷಣದ ಗುಣಮಟ್ಟ ಹಾಗೂ ಸಾಮಾನ್ಯ ಪ್ರವೇಶಾತಿ ಅನುಪಾತಗಳು ವರ್ಧಿಸಲಿವೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವ್ಯಕ್ತಪಡಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಶಿಕ್ಷಣ ಇಲಾಖೆಯು ರೂಪಿಸಿರುವ ಕರ್ನಾಟಕ ಎಲ್.ಎಂ.ಎಸ್ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ, ಈ ವ್ಯವಸ್ಥೆಯಡಿ ವಿದ್ಯಾರ್ಥಿಗಳಿಗೆ ಡಿಜಿಟಲ್ ಕಲಿಕೆಗೆ ಅವಕಾಶ ದೊರೆಯುವುದಲ್ಲದೆ ಎಂದರು. ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, 87 ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜುಗಳು ಮತ್ತು 14 ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜುಗಳ ವಿದ್ಯಾರ್ಥಿಗಳ ಕಲಿಕೆಯ ಸಾಮರ್ಥ್ಯ ಹಾಗೂ ಶಿಕ್ಷಕರ ನಿರಂತರ ಮೌಲ್ಯ ಮಾಪನ ನಡೆಯುವ ಮೂಲಕ ಉನ್ನತ ಶಿಕ್ಷಣದ ಗುಣಮಟ್ಟದಲ್ಲಿ ಕ್ರಾಂತಿಕಾರಕ ಬದಲಾವಣೆಯಾಗಲಿದೆ ಎಂದು ಅವರು ಅಭಿಪ್ರಾಯ ಪಟ್ಟರು.

ಈ ಕ್ರಮದಿಂದ ಸುಮಾರು 4.5 ಲಕ್ಷ ವಿದ್ಯಾರ್ಥಿಗಳ ಹಾಗೂ ಸುಮಾರು 24,000 ಅಧ್ಯಾಪಕರ ಬೋಧನೆ ಮತ್ತು ಕಲಿಕೆಗಳಲ್ಲಿ ಸಕಾರಾತ್ಮಕ ಪರಿಣಾಮ ಉಂಟಾಗಲಿದೆ. ಡಿಜಿಟಲ್ ಕಲಿಕೆ ಯೋಜನೆಯನ್ನು ಒಟ್ಟು ರೂ. 34.14 ಕೋಟಿ ವೆಚ್ಚದಲ್ಲಿ ಎರಡು ರೀತಿಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಅವರು ತಿಳಿಸಿದರು..

Related posts