ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ; ಸಂಪುಟ ಅನುಮೋದನೆ

ಬೆಂಗಳೂರು: ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ತರುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಬೆಂಗಳೂರಿನಲ್ಲಿಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಸಂಬಂಧ ನಿರ್ಧಾರ ಕೈಗೊಳ್ಳಲಾಯಿತು.

ಈ ಕುರಿತಂತೆ ಸುದ್ದಿಗಾರರಿಗೆ ವಿವರ ಒದಗಿಸಿದ ಕಾನೂನು ಸಚಿವ ಮಾಧುಸ್ವಾಮಿ, ನೂತನ ತಿದ್ದುಪಡಿಯಂತೆ, ಲೋಕಾಯುಕ್ತ ಪೊಲೀಸರು ಪ್ರಕರಣಗಳ ಪ್ರಾಥಮಿಕ ವಿಚಾರಣೆಯನ್ನು 90 ದಿನದಲ್ಲಿ ಮುಗಿಸಬೇಕು. ಆರು ತಿಂಗಳ ಒಳಗೆ ಚಾರ್ಜ್ ಶೀಟ್ ಸಲ್ಲಿಸಬೇಕು ಎಂದರು.

ಇದೇ ವೇಳೆ, 5 ವಿದ್ಯುತ್ ಸರಬರಾಜು ಕಂಪನಿಗಳಿಗೆ 2500 ಕೋಟಿ ರೂಪಾಯಿಗಳನ್ನು ಬಡ್ಡಿರಹಿತ ಸಾಲದ ರೂಪದಲ್ಲಿ ನೀಡಲು ಸಂಪುಟ ಒಪ್ಪಿಗೆ ನೀಡಿದೆ. ವಿಜಯಪುರದಲ್ಲಿ ವಿಮಾನ ನಿಲ್ದಾಣಕ್ಕೆ ರೂ. 220 ಕೋಟಿ ಅನುದಾನ ಮೀಸಲಿಡಲು ತೀರ್ಮಾನಿಸಲಾಯಿತು. ಜೊತೆಗೆ ರಾಯಚೂರಿನಲ್ಲಿ ಐಐಟಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು ಎಂದು ಸಚಿವ ಮಾಧುಸ್ವಾಮಿ ವಿವರಿಸಿದರು.

Related posts