ಆರೆಸ್ಸೆಸ್ ನಾಯಕ ಮಾ.ಮಾಧವ ಗೋವಿಂದ ವೈದ್ಯರಿಗೆ ಶ್ರದ್ದಾಂಜಲಿಯ ಮಹಾಪೂರ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಮಾನನೀಯ ಮಾಧವ ಗೋವಿಂದ ವೈದ್ಯ ಅವರು ವಿಧಿವಶರಾಗಿದ್ದಾರೆ. ಪತ್ರಕರ್ತರೂ ಆಗಿದ್ದ ಮಾನನೀಯ ಮಾಧವ ಗೋವಿಂದ ವೈದ್ಯ ಅವರ ನಿಧನಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಕಂಬನಿ ಮಿಡಿದಿದ್ದಾರೆ.

ತಮ್ಮ ಇಡೀ ಜೀವನವನ್ನೇ ಸಮಾಜ ಸೇವೆಗಾಗಿ ಮೀಸಲಿಟ್ಟಿದ್ದ ವೈದ್ಯ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ‌ ಸ್ವಯಂಸೇವಕರಿಗೆ ಇವರ ಅಗಲಿಕೆಯ ಶೋಕ ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಜಾರಕಿಹೊಳಿ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Related posts