ಮೃತರ ಕುಟುಂಬಕ್ಕೆ ತಲಾ ರೂ.6 ಲಕ್ಷ ಪರಿಹಾರ ಘೋಷಣೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಸಂಭವಿಸಿದ ಮೀನುಗಾರಿಕಾ ದೋಣಿ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಸರ್ಕಾರ ತಲಾ 6 ಲಕ್ಷ ರೂಪಾಯಿ ಪರಿಹಾರ ಪ್ರಕಟಿಸಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೂಡ ಬುಧವಾರ ಬಂದರು ಧಕ್ಕೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

ಈ ನಡುವೆ ಸಚಿವರು, ರೂ.6 ಲಕ್ಷಕ್ಕಿಂತ ಹೆಚ್ಚಿನ ಪರಿಹಾರ ಮೊತ್ತ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.
ಈ ಮಧ್ಯೆ ಬೋಟು ಮುಳುಗಿ ಮೃತಪಟ್ಟವರ ಕುಟುಂಬಕ್ಕೆ ಕನಿಷ್ಟ ರೂ.25 ಪರಿಹಾರ ನೀಡುವಂತೆ ಡಿವೈಎಫ್ಎ ಘಟಕ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

Related posts