ಮಂಗಳೂರು ದೋಣಿ ದುರಂತ; ಮತ್ತೆ ನಾಲ್ವರು ಮೀನುಗಾರರ ಶವ ಪತ್ತೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಮಂಗಳವಾರ ಬೋಟ್ ಮುಳುಗಿ ನಾಪತ್ತೆಯಾದವರ ಪೈಕಿ ಮತ್ತೆ ನಾಲ್ವರ ಮೃತದೇಹ ಪತ್ತೆಯಾಗಿದೆ. ಒಬ್ಬರ ಮೃತದೇಹಕ್ಕಾಗಿ ಹುಡುಕಾಟ ಸಾಗಿದೆ.

ಮಂಗಳೂರು ಸಮೀಪ ಅರಬ್ಬೀ ಸಮುದ್ರದಲ್ಲಿ ಮಂಗಳವಾರ ಮೀನುಗಾರಿಕಾ ದೋಣಿ ದುರಂತಕ್ಕೀಡಾಗಿ ಆರು ಮಂದಿ ನಾಪತ್ತೆಯಾಗಿದ್ದರು. ಈ ಪೈಕಿ ನಾಪತ್ತೆಯಾದವರಲ್ಲಿ ಪಾಂಡುರಂಗ ಮತ್ತು ಪ್ರೀತಂ ಎಂಬುವವರ ಮೃತದೇಹ ಮಂಗಳವಾರವೇ ಪತ್ತೆಯಾಗಿತ್ತು. ಉಳಿದ ನಾಲ್ವರ ಪೈಕಿ ಕಸಬಾ ಬೆಂಗರೆ ನಿವಾಸಿ ಹಸೈನಾರ್ (28), ಚಿಂತನ್ (21), ಜಿಯಾವುಲ್ಲಾ (36) ಮತ್ತು ಅನ್ಸಾರ್ ಎಂಬವರ ಮೃತದೇಹ ಬುಧವಾರ ಪತ್ತೆಯಾಗಿದೆ. ಇನ್ನೊಬ್ಬ ಮೀನುಗಾರ ಅನ್ಸಾರ್ ಮೃತದೇಹ ಬಲೆಯಲ್ಲಿ ಸಿಲುಕಿತ್ತು. ಅದನ್ನು ಹೊರತೆಗೆಯಲು ರಕ್ಷಣಾ ತಂಡ ಹರಸಾಹಸ ಪಟ್ಟಿತ್ತಾದರೂ ಶವ ಮತ್ತೆ ಸಮುದ್ರಪಾಲಾಗಿದೆ.

Related posts