ಮಾವಿನ ಕೆರೆ ತ್ಯಾಜ್ಯ ನೀರು ಶುದ್ಧೀಕರಣ ಘಟಕ ಕಾರ್ಯಾರಂಭ

ರಾಯಚೂರು: ಮಾವಿನ ಕೆರೆ ಬಳಿ ನೂತನವಾಗಿ ನಿರ್ಮಿಸಿದ 10 ದಶಲಕ್ಷ ಲೀಟರ್ ನಷ್ಟು ತ್ಯಾಜ್ಯ ನೀರು ಶುದ್ಧೀಕರಣ ಘಟಕವನ್ನು ನಗರಾಭಿವೃದ್ಧಿ ಸಚಿವಬಿ.ಎ.ಬಸವರಾಜ ಉದ್ಘಾಟಿಸಿದ್ದಾರೆ.

ಕೇಂದ್ರ ಪುರಸ್ಕೃತ ಅಮೃತ ಯೋಜನೆ ಅಡಿಯಲ್ಲಿ ರಾಯಚೂರು ನಗರದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮತ್ತು ನಗರಸಭೆ ವತಿಯಿಂದ ತ್ಯಾಜ್ಯ ನೀರು ಶುದ್ಧೀಕರಣ ಘಟಕವನ್ನು ನಿರ್ಮಿಸಲಾಗಿದೆ.

ಮಾತನಾಡಿದ ಸಚಿವ ಬಸವರಾಜ್, ಮಾವಿನ ಕೆರೆ ಯನ್ನು ಶುದ್ಧೀಕರಣಗೊಳಿಸಿ ಅಭಿವೃದ್ಧಿ ಪಡಿಸಲು ನಗರಾಭಿವೃದ್ಧಿ ಇಲಾಖೆಯ ವತಿಯಿಂದ 10 ಕೋಟಿ ರೂಪಾಯಿಗಳನ್ನು ನೀಡಲಾಗುವುದು ಎಂದು ಘೋಷಿಸಿದರು.

ಶಾಸಕರಾದ ಡಾ.ಶಿವರಾಜ್ ಪಾಟೀಲ ಹಾಗೂ ನಗರಸಭೆಯ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

 

Related posts