ರಾತ್ರಿ ಕರ್ಫ್ಯೂ ಇದ್ದರೂ ಕ್ರಿಸ್ ಮಸ್ ಹಬ್ಬ ಆಚರಣೆಗೆ ಅಡ್ಡಿಯಿಲ್ಲ

ಬೆಂಗಳೂರು: ಕೊರೋನಾ ವೈರಾಣು ಸೋಂಕು ತಡೆಯುವ ಉದ್ದೇಶದಿಂದ ರಾತ್ರಿ ಕರ್ಫ್ಯೂ ಜಾರಿಯಾಗಿದ್ದರೂ ಕ್ರಿಸ್ ಮಸ್ ಹಬ್ಬ ಆಚರಣೆಗೆ ಅಡ್ಡಿಯಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ, ದಿನಾಂಕ 24.12.2020 ರ ರಾತ್ರಿ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು (ಮಿಡ್ ನೈಟ್ ಮಾಸ್) ಯಾವುದೇ ಅಡಚಣೆಯಿಲ್ಲದೆ ಮಾಡಬಹುದು ಎಂದಿದ್ದಾರೆ.

Related posts