ಗಣಿ ಕಾಯ್ದೆ ತಿದ್ದುಪಡಿಗೆ ಕ್ವಾರಿ ಮಾಲೀಕರ ಮನವಿ

ಬೆಂಗಳೂರು: 1944ರ ಕೆಎಂಎಂಸಿಆರ್ ಕಾಯ್ದೆಗೆ ಕೆಲವು ತಿದ್ದುಪಡಿ ಮಾಡಬೇಕೆಂದು ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ಸ್ ಓನರ್ಸ್ ಅಸೋಸಿಯೇಷನ್ ಪ್ರತಿನಿಧಿಗಳು ಗಣಿ ಮತ್ತು ಭೂವಿಜ್ಞಾನ ಸಚಿವ ಮುರಗೇಶ್‍ನಿರಾಣಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಸಚಿವರನ್ನು ಭೇಟಿ ಮಾಡಿದ ನಿಯೋಗ ಮನವಿ ಪತ್ರ ಸಲ್ಲಿಸಿತು. ಈ ವೇಳೆ ಸಂಘದ ಗೌರವಾಧ್ಯಕ್ಷ ದತ್ತಾತ್ರಿ.ಎಸ್, ಅಧ್ಯಕ್ಷ ಸಂಜೀವ ಹಟ್ಟಿಹೊಳಿ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಮತ್ತಿತರರು ಉಪಸ್ಥಿತರಿದ್ದರು.

Related posts