ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕೊರೋನಾ ಸೋಂಕು ಕಂಡುಬಂದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಕೆ.ಎಸ್.ಈಶ್ವರಪ್ಪ, ನನಗೆ ಇಂದು ಕರೊನಾ ಸೋಂಕು ದೃಡ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ . ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ ಎಂದವರು ಹೇಳಿದ್ದಾರೆ.
ನನಗೆ ಇಂದು ಕರೊನಾ ಸೋಂಕು ದೃಡ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ . ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ.
ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ.
— K S Eshwarappa (@ikseshwarappa) September 1, 2020
ಇದೇ ವೇಳೆ, ಹಿರಿಯ ನಾಯಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶೀಘ್ರವಾಗಿ ಗುಣಮುಖರಾಗಿ ತಮ್ಮ ಎಂದಿನ ಕರ್ತವ್ಯಗಳಲ್ಲಿ ತೊಡಗಿಸಿಕೊಳ್ಳಲಿ ಎಂದು ಆಶಿಸಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಹಿರಿಯ ನಾಯಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ ಕೆ.ಎಸ್.ಈಶ್ವರಪ್ಪ ಅವರಿಗೆ ಕೊರೊನಾ ಸೋಂಕು ಧೃಢಪಟ್ಟಿರುವ ವಿಷಯ ತಿಳಿದು ಬೇಸರವಾಗಿದೆ. ಅವರು ಶೀಘ್ರವಾಗಿ ಗುಣಮುಖರಾಗಿ ತಮ್ಮ ಎಂದಿನ ಕರ್ತವ್ಯಗಳಲ್ಲಿ ತೊಡಗಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.@ikseshwarappahttps://t.co/PumoUb0EcG
— Dr Sudhakar K (@mla_sudhakar) September 1, 2020