ಉಡುಪಿ ವ್ಯಾಪ್ತಿಯಲ್ಲಿ ಭೂ ಪರಿವರ್ತನೆ ಸಮಸ್ಯೆ; ಶಾಸಕ ರಘುಪತಿ ಭಟ್ ಸಿಎಂ ಭೇಟಿ

ಬೆಂಗಳೂರು: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಪ್ರಮುಖವಾಗಿ ಕೃಷಿ ವಲಯದಲ್ಲಿ ಭೂ ಪರಿವರ್ತನೆ ಸಮಸ್ಯೆ, ಏಕ ನಿವೇಶನ ಮಾಡಲು ರಸ್ತೆ ದಾನ ಪತ್ರದ ಬಗ್ಗೆ ಭೂಪರಿವರ್ತನೆ ಸಮಸ್ಯೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಇತರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಶಾಸಕ ಕೆ. ರಘುಪತಿ ಭಟ್ ಅವರ ನೇತೃತ್ವದ ನಿಯೋಗ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದೆ. ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಸದಸ್ಯರುಗಳು ಈ ವೇಳೆ ಉಪಸ್ಥಿತರಿದ್ದರು.

ಮುಖ್ಯಮಂತ್ರಿಯವರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ತಾಂತ್ರಿಕ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅತಿ ಶೀಘ್ರದಲ್ಲಿ ಬಗೆಹರಿಸುವ ಭರವಸೆಯನ್ನು ನೀಡಿದರು. ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಕೆ. ರಾಘವೇಂದ್ರ ಕಿಣಿ, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಕಪ್ಪೆಟ್ಟು ಪ್ರವೀಣ್ ಕುಮಾರ್ ಶೆಟ್ಟಿ , ದಿನಕರ ಪೂಜಾರಿ ಕುಂಜಿಬೆಟ್ಟು ಉಪಸ್ಥಿತರಿದ್ದರು.

Related posts