ಅಮೆರಿಕಾ ಚುನಾಯಿತ ಅಧ್ಯಕ್ಷ ಜೋ ಬೈಡನ್’ಗೆ ಮೋದಿ ಅಭಿನಂದನೆ

ದೆಹಲಿ: ಅಮೆರಿಕಾ ಚುನಾಯಿತ ಅಧ್ಯಕ್ಷ ಜೋ ಬೈಡನ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ನೂತನ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಳ್ಳಲಿರುವ ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ತಾವು ಅಮೆರಿಕಾ ಚುನಾಯಿತ ಅಧ್ಯಕ್ಷ ಜೋ ಬೈಡನ್ ಅವರಿಗೆ ಕರೆ ಮಾಡಿ ಶುಭ ಹಾರೈಸಿರುವುದಾಗಿ ಹೇಳಿಕೊಂಡಿದ್ದಾರೆ.

ಕಮಲಾ ಹ್ಯಾರಿಸ್​ಗೂ ಕೂಡ ಮೋದಿ ಶುಭಾಶಯ ತಿಳಿಸಿದ್ದಾರೆ.

Related posts