ಗಾಂಧಿ ಜಯಂತಿ; ರಾಷ್ಟ್ರಪಿತನಿಗೆ ಗೌರವ ನಮನ

ದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 151ನೇ ಜನ್ಮದಿನವನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ರಾಷ್ಟ್ರಪಿತನಿಗೆ ಗೌರವ ಸಲ್ಲಿಸಿದ್ದಾರೆ.

ಗಾಂಧೀಜಿಯವರ ಸ್ಮಾರಕ ದೆಹಲಿಯಲ್ಲಿರುವ ರಾಜ್’ಘಾಟ್ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿಯವರ ಸ್ಮಾರಕ ವಿಜಯ್ ಘಾಟ್’ಗೆ ತೆರಳಿ ಪ್ರಧಾನಿ ಮೋದಿಯವರು ನಮನ ಸಲ್ಲಿಸಿದರು.

ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಸಂದೇಶ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಪ್ರೀತಿಯ ಬಾಪುವಿಗೆ ನಮಸ್ಕರಿಸುತ್ತೇನೆ. ಅವರ ಜೀವನ ಮತ್ತು ಉದಾತ್ತ ಆಲೋಚನೆಗಳಿಂದ ಕಲಿಯಬೇಕಾದದ್ದು ಬಹಳಷ್ಟಿದೆ. ಸಮೃದ್ಧ ಮತ್ತು ಸಹಾನುಭೂತಿಯುಳ್ಳ ಭಾರತವನ್ನು ರಚಿಸುವಲ್ಲಿ ಬಾಪು ಅವರ ಆದರ್ಶಗಳು ನಮಗೆ ಮಾರ್ಗದರ್ಶನ ನೀಡಲಿ ಎಂದು ಹೇಳಿದ್ದಾರೆ.

Related posts