ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ; ಗಣ್ಯರಿಂದ ಗೌರವ ನಮನ

ದೆಹಲಿ: ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಜನ್ಮ ದಿನವನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ. ಲಾಲ್ ಬಹದ್ದೂರ್ ಶಾಸ್ತ್ರಿಯವರ 116ನೇ ಜನ್ಮದಿನ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯ ಸಹಿತ ಗಣ್ಯರು ಗೌರವ ಸಲ್ಲಿಸಿದ್ದಾರೆ.

ಲಾಲ್ ಬಹದ್ದೂರ್ ಶಾಸ್ತ್ರಿ ಜೀ ಅವರು ಸ್ಥಿರ ಮತ್ತು ಅತ್ಯಂತ ದೃಢ ನಿಲುವಿನ ವ್ಯಕ್ತಿಯಾಗಿದ್ದರು ಎಂದು ಬಣ್ಣಿಸಿದ ಪ್ರಧಾನಿ ಮೋದಿ ಬಣ್ಣಿಸಿದ್ದಾರೆ. ಲಾಲ್ ಬಹದ್ದೂರ್ ಶಾಸ್ತ್ರಿ ಜೀ ಅವರು ಸರಳತೆಯನ್ನು ನಿರೂಪಿಸಿದ್ದರು. ರಾಷ್ಟ್ರದ ಕಲ್ಯಾಣಕ್ಕಾಗಿ ಬದುಕಿದರು. ಭಾರತಕ್ಕಾಗಿ ಅವರು ಮಾಡಿದ ಎಲ್ಲದಕ್ಕೂ ಆಳವಾದ ಕೃತಜ್ಞತೆಗಳೊಂದಿಗೆ ಅವರ ಜಯಂತಿಯಲ್ಲಿ ನಾವು ಅವರನ್ನು ನೆನಪಿಸಿಕೊಳ್ಳುತ್ತೇವೆಂದು ಮೋದಿ ಹೇಳಿದ್ದಾರೆ.

Related posts