ಬಿಎಸ್’ವೈ ಸಂಪುಟಕ್ಕೆ ಹೊಸಬರ ಸೇರ್ಪಡೆ. 7 ಸಚಿವರ ಪ್ರಮಾಣವಚನ

ಬೆಂಗಳೂರು: ಬಿಜೆಪಿ ಹೈಕಮಾಂಡ್ ಮನವೊಲಿಸಿ, ಅತೃಪ್ತರ ಮನತಣಿಸಿ ಕೊನೆಗೂ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ತಮ್ಮ ಸಂಪುಟವನ್ನು ವಿಸ್ತರಣೆ ಮಾಡಿದ್ದಾರೆ. ರಾಜಭವನದಲ್ಲಿ ಏಳು ಮಂದಿ ನೂತನ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ರಾಜಭವನದ ಗಾಜಿನ ಮನೆಯಲ್ಲಿ 3:50ಕ್ಕೆ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ ಗಮನಸೆಳೆಯಿತು. ಸಿಎಂ ಯಡಿಯೂರಪ್ಪ ಉಪಸ್ಥಿತಿಯಲ್ಲಿ ನೂತನ ಸಚಿವರಿಗೆ ರಾಜ್ಯಪಾಲರು ಪ್ರಮಾಣವಚನ ಬೋಧಿಸಿದರು. ಉಮೇಶ್ ಕತ್ತಿ, ಮುರುಗೇಶ್ ರುದ್ರಪ್ಪ ನಿರಾಣಿ, ಅರವಿಂದ್​ ಲಿಂಬಾವಳಿ, ಎಂಟಿಬಿ ನಾಗರಾಜ್​, ಆರ್.ಶಂಕರ್​, ಸಿಪಿ ಯೋಗೇಶ್ವರ್. ​ಎಸ್. ಅಂಗಾರ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ಸೇರಿದಂತೆ ಬಿಜೆಪಿ ನಾಯಕರು ಹಾಗೂ ಸಚಿವರನೇಕರು ಈ ಸಮಾರಂಭದಲ್ಲಿ ಭಾಗವಹಿಸಿದ್ದರು.

Related posts