ರಾಜ್ಯದಲ್ಲಿ ಶೀಘ್ರವೇ ಹೊಸ ಮರಳು ನೀತಿಯನ್ನು ಜಾರಿಗೆ

ಚಾಮರಾಜನಗರ: ರಾಜ್ಯದಲ್ಲಿ ಸದ್ಯದಲ್ಲಿಯೇ ಹೊಸ ಮರಳು ನೀತಿಯನ್ನು ಜಾರಿಗೆ ತರಲಾಗುವುದು ಎಂದು ಗಣಿ ಇಲಾಖೆ ಸಚಿವ ಸಿ.ಸಿ.ಪಾಟೀಲ್ ತಿಳಿಸಿದ್ದಾರೆ.

ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸಿ.ಸಿ.ಪಾಟೀಲ್, ಹೊಸ ನೀತಿ ಜನಸ್ನೇಹಿಯಾಗಿರಲಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಮೂರು ಹಂತಗಳಲ್ಲಿ ಮರಳನ್ನು ಮಾರಾಟ ಮಾಡುವುದಕ್ಕೆ ಇದು ಅವಕಾಶ ಸಿಗಲಿದೆ ಎಂದು ಮಾಹಿತಿ ಹಂಚಿಕೊಂಡರು.

ಈ ಮಾರಲ್ ನೀತಿ ಜಾರಿಯಾದರೆ ಒಂದು ಟನ್ ಮರಳು 300ರಿಂದ 350 ರೂಪಾಯಿಗೆ ಲಭ್ಯವಾಗಲಿದೆ ಎಂದು ಅವರಿ ವಿಸ್ವಾಸ ವ್ಯಕ್ತಪಡಿಸಿದರು.

Related posts