ಹುಷಾರ್.. ಈ ಪ್ರದೇಶಗಳಲ್ಲಿ ಶನಿವಾರದವರೆಗೆ ಸಂಚಾರ ನಿರ್ಬಂಧ

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ ಅನಾಹುತಗಳನ್ನು ತಪ್ಪಿಸಲು ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ. ಡಿ. 31ರ ರಾತ್ರಿ 8 ರಿಂದ ಜ. 1ರ ಮುಂಜಾನೆ 2ರವರೆಗೆ ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಮ್ಯೂಸಿಯಂ ರಸ್ತೆ, ರೆಸ್ಟ್ ಹೌಸ್ ಪಾರ್ಕ್ ರಸ್ತೆ, ರೆಸಿಡೆನ್ಸಿ ರಸ್ತೆಗಳಲ್ಲಿ ವಾಹನಗಳ ಸಂಚಾರ ಮತ್ತು ಪ್ರವೇಶ ನಿಷೇಧ ಮಾಡಲಾಗಿದೆ.

ಡಿ. 31ರ ರಾತ್ರಿ 10 ರಿಂದ ಬೆಳಗ್ಗೆ 6ರವರೆಗೆ ಬೆಂಗಳೂರಿನ ಪ್ರಮುಖ ಮೇಲ್ಸೇತುವೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಮಡಿವಾಳ, ಎಲೆಕ್ಟ್ರಾನಿಕ್ ಸಿಟಿ, ಮೈಕೋ ಲೇಔಟ್, ಏರ್ಪೋರ್ಟ್, ವೈಟ್​​ ಫೀಲ್ಡ್​​, ಹೆಚ್ಎಸ್ಆರ್ ಲೇಔಟ್, ಹಲಸೂರು, ಕೆ.ಆರ್.ಪುರ, ಪುಲಿಕೇಶಿನಗರ, ಬಾಣಸವಾಡಿ, ಆಡುಗೋಡಿ, ಮೈಸೂರು ರಸ್ತೆ, ಬಸವನಗುಡಿ, ಜಯನಗರ, ಮಲ್ಲೇಶ್ವರಂ, ಬನಶಂಕರಿ, ಕೆಂಗೇರಿ, ಯಶವಂತಪುರ, ಹೆಬ್ಬಾಳ, ಹಾಗೂ ಪೀಣ್ಯ ಪ್ರದೇಶಗಳಲ್ಲಿರುವ ಮೇಲ್ಸೇತುವೆಗಳಲ್ಲಿ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ.ಬೆಂಗಳೂರಿನ ಒಟ್ಟು 44 ಮೇಲ್ಸೇತುವೆಗಳನ್ನು ಬಂದ್ ಮಾಡಲು ಪೊಲೀಸ್ ಅಧಿಕಾರಿಗಳು ತೀರ್ಮಾನಿಸಿದ್ದಾರೆ.

Related posts