ಭಯೋತ್ಪಾದನೆ ಚಟುವಟಿಕೆಗಳಿಗೆ ನೆರವು ಆರೋಪ; ಟ್ರಸ್ಟ್ ಕಚೇರಿ ಮೇಲೆ ಎನ್ಐಎ ದಾಳಿ

ದೆಹಲಿ: ಸಮಾಜಸೇವೆ ಹೆಸರಲ್ಲಿ ದೇಣಿಗೆ ಸಂಗ್ರಹಿಸಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಹಾಗೂ ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಸಹಾಯ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಸ್ವಯಂ ಸೇವಾ ಸಂಸ್ಥೆ ಮತ್ತು ಟ್ರಸ್ಟ್’ಗಳ ಮೇಲೆ ಎನ್ಐಎ ದಾಳಿ ನಡೆಸಿದೆ.

ಬೆಂಗಳೂರಿನ ಒಂದು ಸ್ಥಳ ಹಾಗೂ ಕಾಶ್ಮೀರದ ಒಟ್ಟು 10 ಪ್ರದೇಶಗಳ ಮೇಲೆ ಎನ್ಐಎ ಕಾರ್ಯಾಚರಣೆ ನಡೆಸಿದೆ.

ಸ್ಥಳೀಯ ಪೊಲೀಸ್‌ ಹಾಗೂ ಅರೆಸೇನಾ ಪಡೆಗಳ ನೆರವಿನೊಂದಿಗೆ ಎನ್‌ಐಎ ಶ್ರೀನಗರ, ಬಂಡಿಪೋರಾ ಹಾಗೂ ಬೆಂಗಳೂರಿನಲ್ಲಿ ಈ ಶೋಧ ಕಾರ್ಯಾಚರಣೆ ನಡೆಸಿದೆ. ಎನ್‌ಜಿಒ ಅಥರೌಟ್‌ ಮತ್ತು ಜೆಕೆ ಟ್ರಸ್ಟ್‌ಗಳ ಕಚೇರಿ ಮೇಲೂ ಶೋಧ ನಡೆದಿದೆ ಎನ್ನಲಾಗಿದೆ.

Related posts