ಜುಲೈ 15ರವರೆಗೆ ಅಂತರಾಷ್ಟ್ರೀಯ ವಿಮಾನ ಸೇವೆ ಇಲ್ಲ

ದೆಹಲಿ: ಕೊರೋನಾ ಹಾವಳಿ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿರುವ ಅಂತರಾಷ್ಟ್ರೀಯ ವಿಮಾನ ಸೇವೆ ಜುಲೈ 15ರವರೆಗೆ ಕಾರ್ಯಾರಂಭ ಇಲ್ಲ. ಈ ಸಂಬಂಧ ಜಾರಿಯಲ್ಲಿರುವ ನಿರ್ಬಂಧ ಮುಂದಿನ ತಿಂಗಳವರೆಗೂ ಮುಂದುವರಿಯಲಿದೆ.

ಈ ಸಂಬಂಧ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ನಾಗರಿಕ ವಿಮಾನಯಾನ ನಿರ್ದೇಶನಾಲಯ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಜುಲೈ 15ರ ವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದೆ.

ಮಾರ್ಚ್ 25ರಂದು ದೇಶೀ ಹಾಗೂ ಅಂತಾರಾಷ್ಟ್ರೀಯ ವಿಮಾನಯಾನ ಸೇವೆ ಸ್ಥಗಿತಗೊಂಡಿತ್ತು. ಮೇ 25ರಿಂದ ದೇಶಿಯ ವಿಮಾನ ಹಾರಾಟ ಆರಂಭವಾಗಿದೆ. ಆದರೆ ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಮುಂದುವರೆಸಲಾಗಿದೆ.

Related posts