ಮತ್ತೆ ಲಾಕ್’ಡೌನ್ ಇಲ್ಲ; ಸರ್ಕಾರ ಸ್ಪಷ್ಟನೆ

ಬೆಂಗಳೂರು: ಕೊರೋನಾ ಹಾವಳಿ ಮುಂದುವರಿದಿದ್ದು ರಾಜ್ಯದಲ್ಲಿ ಮತ್ತೆ ಲಾಕ್’ಡೌನ್ ಜಾರಿಗೊಳ್ಳುತ್ತಾ ಎಂಬ ಅನುಮಾನ ಎಲ್ಲರನ್ನೂ ಕಾದಿದೆ. ಲಾಕ್’ಡೌನ್ ಜಾರಿಗೆ ಕಾಂಗ್ರೆಸ್ ಶಾಸಕರು ಆಗ್ರಹಿಸಿದ್ದಾರಾದರೂ ಸರ್ಕಾರ ಅದಕ್ಕೆ ಒಪ್ಪುತ್ತಿಲ್ಲ.
ಬೆಂಗಳೂರಿನಲ್ಲಿಂದು ಸಿಎಂ ಯಡಿಯೂರಪ್ಪ ಬೆಂಗಳೂರಿನ ಶಾಸಕರ ಸಭೆ ಕರೆದು ಪರಿಸ್ಥಿತಿ ಬಗ್ಗೆ ಅವಲೋಕಿಸಿದರು.

ಎಲ್ಲಾ ಪಕ್ಷಗಳ ಶಾಸಕರ ಜೊತೆಗಿನ ಸಭೆಯ ಬಳಿಕ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್, ರಾಜ್ಯ ಹಾಗೂ ಬೆಂಗಳೂರಿನಲ್ಲಿ ಯಾವುದೇ ಲಾಕ್‍ಡೌನ್ ಇಲ್ಲ ಎಂದು ಸ್ಪಷ್ಟಪಡಿಸಿದರು.

ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದ ಶಾಸಕರ ಸಲಹೆಗಳಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು.

Related posts