ಪಂಚಾಯತ್ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ; ಸುರ್ಜೆವಾಲಾ

ಬೆಂಗಳೂರು: ಗ್ರಾಮ ಪಂಚಾಯತ್ ಚುನಾವಣೆಯ ಬಳಿಕ ರಾಜ್ಯದ ಬಿಜೆಪಿ ಸರ್ಕಾರ ಪತನವಾಗಲಿದೆ ಎಂದು ಪ್ರದೇಶ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಹಿರಿಯ ಮುಖಂಡರು, ಸಂಸದರು, ಶಾಸಕರು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ರಾಜ್ಯದ ಜನರ ಒಳಿತಿಗಾಗಿ ಈ ಸರ್ಕಾರ ಕೆಲಸ ಮಾಡುತ್ತಿಲ್ಲ. ಸರ್ಕಾರದ ನಡೆಗೆ ಕೇಂದ್ರದ ಬಿಜೆಪಿ ನಾಯಕರೇ ಬೇಸತ್ತಿದ್ದಾರೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು ಹೇಳಿದರು.

ಪಕ್ಷದಲ್ಲಿ ಈಗಾಗಲೇ ಸಾಕಷ್ಟು ಸೋಲು ಕಂಡಿದ್ದೇವೆ, ಆದರೆ ಪ್ರತಿ ಸೋಲೂ ಹೊಸ ಭರವಸೆಯೊಂದಿಗೆ ಹೆಜ್ಜೆ ಇಡಲು ಅವಕಾಶ್ ನಿಡುತ್ತಿದೆ ಎಂದಿದ್ದಾರೆ.

Related posts