ಪಂಚಾಯತ್ ಫಲಿತಾಂಶವು ಬಿಜೆಪಿಗೆ ಜನತೆಯ ಶ್ರೀರಕ್ಷೆ; ಸಿ.ಟಿ.ರವಿ

ಬೆಂಗಳೂರು: ಗ್ರಾಮ ಪಂಚಾಯತ್ ಚುನಾವಣೆಯ ಫಲಿತಾಂಶ ಕೇಂದ್ರದ ಮೋದಿ ಸರ್ಕಾರ ಹಾಗೂ ರಾಜ್ಯದಲ್ಲಿನ ಬಿಎಸ್’ವೈ ಆಡಳಿತಕ್ಕೆ ಜನರ ಶ್ರೀರಕ್ಷೆ ಇದೆ ಎಂಬುದನ್ನು ಸಾಬೀತು ಮಾಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಬಣ್ಣಿಸಿದ್ದಾರೆ.

ಅಸ್ತಿತ್ವಕ್ಕಾಗಿ ಹೋರಾಟ ನಡೆಸುತ್ತಿರುವ ಕೆಲವು ಪಕ್ಷಗಳು “ಕೃಷಿ ಮಸೂದೆ”ಗಳ ಕುರಿತು ನಡೆಸುತ್ತಿರುವ ಅಪಪ್ರಚಾರಗಳನ್ನು ಗಣನೆಗೆ ತೆಗೆದುಕೊಳ್ಳದೆ ರಾಜ್ಯದ ಮಹಾಜನತೆ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಬೆಂಬಲಿಸಿದ್ದಾರೆ. ಇದು ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಉತ್ತಮ ಆಡಳಿತದ ಫಲಶ್ರುತಿ ಎಂದು ಸಿ.ಟಿ.ರವಿ ಟ್ವೀಟ್ ಮಾಡಿದ್ದಾರೆ.

ಈ ಫಲಿತಾಂಶ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜನಪರ ಆಡಳಿತಕ್ಕೆ ಕರ್ನಾಟಕದ ಮಹಾಜನತೆ ನೀಡಿದ ಶ್ರೀರಕ್ಷೆಯಾಗಿದೆ ಎಂದು ಸಿ.ಟಿ.ರವಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

Related posts