ವೈದ್ಯಕೀಯ ಶಿಕ್ಷಣ ಇಲಾಖೆ ಸಿಬ್ಬಂದಿಯ ಬಹು ದಿನಗಳ ಬೇಡಿಕೆ ಈಡೇರಿಕೆ; ಸಿಎಂಗೆ ಸುಧಾಕರ್ ಧನ್ಯವಾದ

ಬೆಂಗಳೂರು : ವೈದ್ಯಕೀಯ ಶಿಕ್ಷಣ ಇಲಾಖೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಬಹು ದಿನಗಳ ಬೇಡಿಕೆಯಾಗಿದ್ದ ಪಿಂಚಣಿ ಯೋಜನೆಗೆ (ಎನ್‌ಪಿಎಸ್) ಸರ್ಕಾರ‌ ಹಸಿರು ನಿಶಾನೆ ತೋರಿಸಿದೆ.

ಈ ಕುರಿತಂತೆ ಪ್ರತಿಕ್ರಿಯಿಸಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕೊರೋನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿ ಯೋಧರಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗೆ ಅನೇಕ ದಿನಗಳಿಂದ ನನೆಗುದಿಗೆ ಬಿದ್ದಿದ್ದ ಎನ್‌ಪಿಎಸ್‌ ಯೋಜನೆ ಜಾರಿಗೊಳಿಸಿರುವ ಈ ತೀರ್ಮಾನ ಸಾರ್ಥಕಭಾವ ಮೂಡಿಸಿದೆ ಎಂದಿದ್ದಾರೆ.

ನಮ್ಮ ಮನವಿಗೆ ಸ್ಪಂದಿಸಿ ಅನಮತಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಇಲಾಖೆ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಡಾ. ಕೆ. ಸುಧಾಕರ್ ಹೇಳಿದ್ದಾರೆ.

Related posts