ಪ್ರಣಬ್ ಮುಖರ್ಜಿ ನಿಧನಕ್ಕೆ ಸಚಿವ ಸಿ.ಟಿ.ರವಿ ಕಂಬನಿ

ಬೆಂಗಳೂರು: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ನಿಧನಕ್ಕೆ ಕನ್ನಡ ಮತ್ತು ಸಂಸ್ಕೃತಿ, ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಸರಳ ಸಜ್ಜನಿಕೆಯ ವ್ಯಕ್ತಿತ್ವದ ಹಿರಿಯ ರಾಜಕಾರಣಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ದೇಶ ಕಂಡ ಅಪ್ರತಿಮ ಸಂಸದೀಯ ಪಟು. ಅವರು ಭಾರತ ರತ್ನ ಪ್ರಶಸ್ತಿ ಪುರಸ್ಕೃತರು , ರಕ್ಷಣಾ, ವಿದೇಶಾಂಗ , ಹಣಕಾಸು ಸಚಿವರಾಗಿದ್ದಲ್ಲದೆ, ಸರ್ಕಾರದ ಹಲವು ಸಮಿತಿಗಳ ಮುಖ್ಯಸ್ಥರಾಗಿ, ಲೋಕಸಭಾ ನಾಯಕರಾಗಿಯೂ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ ಅಪರೂಪದ ಸಂಸದೀಯ ಪಟು ಎಂದು ಸಚಿವ ಸಿ.ಟಿ.ರವಿ ಗುಣಗಾನ ಮಾಡಿದ್ದಾರೆ.

ರಾಷ್ಟ್ರಪತಿಗಳಾಗಿ ಪ್ರಣಬ್ ಮುಖರ್ಜಿಯವರು ದೇಶದ ಗರಿಮೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿದ್ದರು.ಇಂತಹ ಮಹನೀಯರ ಸೇವೆಯನ್ನು ಗುರುತಿಸಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ‘ಭಾರತರತ್ನ’ ಪ್ರಶಸ್ತಿ ನೀಡಿ ಗೌರವಿಸಿತ್ತು. ದೂರದೃಷ್ಟಿಯುಳ್ಳವರಾಗಿದ್ದ ಅವರು ಭಾರತ ಕಂಡ ಅತ್ಯುತ್ತಮ ಸಂಸದ ಹಾಗೂ ಸಮರ್ಥ ರಾಜಕಾರಣಿ ದೇಶದ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಅಪಾರ‌. ಇಂತಹ ಮಹಾನ್ ಚೇತನದ ಅಗಲಿಕೆಯಿಂದ ನಮ್ಮ ದೇಶಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಚಿವ ಸಿ.ಟಿ.ರವಿ ದುಃಖ ವ್ಯಕ್ತಪಡಿಸಿದ್ದಾರೆ.

Related posts