ಪ್ರಣಬ್ ಮುಖರ್ಜಿ ನಿಧನಕ್ಕೆ ಬಂಡೆಪ್ಪ ಖಾಶೆಂಪುರ ಶೋಕ

ಪ್ರಣಬ್ ಮುಖರ್ಜಿ ನಿಧನಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ ಶೋಕ ವ್ಯಕ್ತಪಡಿಸಿದ್ದಾರೆ.

ಮಾಜಿ ರಾಷ್ಟ್ರಪತಿಗಳು, ಹಿರಿಯ ಮುತ್ಸದ್ದಿಗಳು ಆಗಿದ್ದ ಪ್ರಣಬ್ ಮುಖರ್ಜಿಯವರು ನಮ್ಮನ್ನು ಅಗಲಿರುವುದು ದುರ್ದೈವ ಎಂದವರು ಹೇಳಿದ್ದಾರೆ. ಶ್ರೀಯುತರ ಅಗಲಿಕೆಯಿಂದಾಗಿ ನಾವೆಲ್ಲಾ ಒಬ್ಬ ಮಾರ್ಗದರ್ಶಕರನ್ನು ಕಳೆದುಕೊಂಡಂತಾಗಿದೆ. ರಾಷ್ಟ್ರದ ಹಿತ ಕಾಯುವ ಸಂದರ್ಭದಲ್ಲಿ ಅತ್ಯಂತ ಗಟ್ಟಿ ನಿಲುವನ್ನು ತೆಗೆದುಕೊಳ್ಳುತ್ತಿದ್ದ ಪ್ರಣಬ್ ಮುಖರ್ಜಿಯವರು, ಯಾವುದೇ ಸಂದರ್ಭದಲ್ಲಿಯೂ ತತ್ವನಿಷ್ಠ ಗಳೊಂದಿಗೆ ರಾಜಿ ಮಾಡಿಕೊಳ್ಳುತ್ತಿರಲಿಲ್ಲ. ಅವರು ಕೇಂದ್ರ ಸಚಿವರಾಗಿದ್ದಾಗ ಭಾರತದ ಹಿರಿಮೆ ಗರಿಮೆಗಳನ್ನು ಹಲವು ಸಂದರ್ಭಗಳಲ್ಲಿ ಅಂತರಾಷ್ಟ್ರೀಯ ಮಟ್ಟಗಳಲ್ಲಿ ಎತ್ತಿಹಿಡಿದ ಶ್ರೇಯಸ್ಸು ಅವರಿಗೆ ಸೇರಿದೆ ಎಂದು ಬಂಡೆಪ್ಪ ಖಾಶೆಂಪುರ ಹೇಳಿದ್ದಾರೆ.

Related posts