ನಾಳೆಯಿಂದ ಭಾರೀ ವರ್ಷಧಾರೆ; ಮೇ 15,16 ರಂದು ಬಿರುಗಾಳಿ ಮಳೆ ಆತಂಕ

ಬೆಂಗಳೂರು: ಕೊರೋನಾ ಸಂಕಷ್ಟದ ನಡುವೆ ಇದೀಗ ಬಿರುಗಾಳಿ-ಮಳೆಯ ಆತಂಕ ಎದುರಾಗಿದೆ. ಮೇ 15 ಮತ್ತ 16ರಂದು ದೇಶದ ಹಲವೆಡೆ ಭಾರೀ‌ಮಳೆಯಾಗುವ ಮುನ್ಸೂಚನೆ ವ್ಯಕ್ತವಾಗಿದೆ. ಬಂಗಾಳ ಕೊಳ್ಳಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು ದಕ್ಷಿಣ ಭಾರತದ ರಾಜ್ಯಗಳಲ್ಲಿ ಬಿರುಗಾಳಿ-ಮಳೆಯ ಆತಂಕ ಆವರಿಸಲಿದೆ. ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳ ಕೊಳ್ಳಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು, ಇದರ ಪರಿಣಾಮವಾಗಿ ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ, ಕೇರಳ ಹಾಗೂ ಒಡಿಶಾ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಂಭವವಿದೆ.

ಇದನ್ನೂ ಓದಿ.. ಖಡಕ್ ಅಧಿಕಾರಿ ವರ್ಗಾವಣೆ; ಒತ್ತಡಕ್ಕೆ ಮಣಿಯಿತೇ ಸರ್ಕಾರ?

ಕರ್ನಾಟಕಕ್ಕೂ ಇದು ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದೆ. ಮೇ 12ರಿಂದಲೇ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದ್ದು, ಅದರ ಜೊತೆಯಲ್ಲೇ ಈ ವಾಯುಭಾರ ಕುಸಿತದಿಂದ ಕೂಡಾ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂಬ ಮುನ್ಸೂಚನೆಯನ್ನೂ ಹವಾಮಾನ ತಜ್ಞರು ನೀಡಿದ್ದಾರೆ.

ಮೇ 15 ಮತ್ತು 16ರಂದು ಎರಡು ದಿನಗಳ್ಲಿ ಗಂಟೆಗೆ 100 ಕಿಲೋ ಮೀಟರ್‌ಗೂ ಹೆಚ್ಚು ವೇಗದಲ್ಲಿ ಗಾಳಿ ಬೀಸಲಿದೆ. ಇದರ ಪರಿಣಾಮವಾಗಿ ದಕ್ಷಿಣದ ರಾಜ್ಯಗಳ ಕರಾವಳಿ ತೀರಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಮುನ್ಸೂಚನೆ ಹಿನ್ಬೆಲೆಯಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಇದನ್ನೂ ಓದಿ ರಾಜ್ಯದ ಖಜಾನೆಗೆ ಹಣದ ಹೊಳೆ; ಮದ್ಯ ಮಾರಾಟದಿಂದ ಬಂದ ಆದಾಯ ಎಷ್ಟು ಗೊತ್ತಾ?  

 

 

Related posts