ಕೊಡಗಿನಲ್ಲಿ ನಿಂತರ ಮಳೆ; ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮೈಸೂರು: ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಕಾವೇರಿ ಕಣಿವೆ ಪ್ರದೇಶದಲ್ಲೂ ವರ್ಷಧಾರೆ ಮುಂದುವರಿದಿದೆ.

ಕೊಡಗಿನಲ್ಲಿ ಸುರಿಯುತ್ತಿರುವ ನಿಂತರ ಮಳೆಯಿಂದ ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜಸಾಗರ ಜಲಾಶಯಕ್ಕೆ ಭಾರೀ ಪ್ರಮಾಣದ ನೀರು ಹರಿದುಬರುತ್ತಿದೆ. ಈ ಹಿನ್ನೆಲೆಯಲ್ಲಿ ಅಣೆಕಟ್ಟೆಯಿಂದಲೂ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿಯಬಿಡಲಾಗಿದೆ. ಇದರಿಂದಾಗಿ ನದಿ ಪಾತ್ರಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಬಹುದೆಂಬ ಆತಂಕದ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಪ್ರವಾಸಿಗಳ ಆಕರ್ಷಣೆಯ ಕೇಂದ್ರಗಳಾದ ಶ್ರೀರಂಗಪಟ್ಟಣದ ಬಲಮುರಿ, ಎಡಮುರಿ ಶ್ರೀರಂಗನಾಥ ದೇವಸ್ಥಾನದ ಸ್ನಾನಘಟ್ಟ, ಗೆಂಡೆಹೊಸಹಳ್ಳಿ ಪಕ್ಷಿಧಾಮ, ವೆಲ್ಲಿಸ್ಲಿ ಸೇತುವೆ. ಸಂಗಮ, ಗೋಸಾಯಿ ಘಾಟ್, ಮುತ್ತತ್ತಿ ಮೊದಲಾದೆಡೆ ಪೊಲೀಸರ ಕಣ್ಗಾವಲು ಹಾಕಲಾಗಿದೆ.

Related posts