ಬಸವಣ್ಣ ಪ್ರತಿಮೆ ಭಗ್ನ ಪ್ರಕರಣ; ಶಾಸಕ ಯತೀಂದ್ರ ಖಂಡನೆ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ಬಸವಣ್ಣ ಪ್ರತಿಮೆ ಭಗ್ನ ಪ್ರಕರಣವನ್ನು ಶಾಸಕ ಯತೀಂದ್ರ ಖಂಡಿಸಿದ್ದಾರೆ.

ಜಗಜ್ಯೋತಿ ಬಸವಣ್ಣನವರ ಪ್ರತಿಮೆಯನ್ನು ಭಗ್ನ ಮಾಡಿರುವುದು ಅತ್ಯಂತ ಅಕ್ಷಮ್ಯ ಎಂದು ಅವರು ಹೇಳಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಕೂಡಲೆ ತನಿಖೆಗೆ ಆದೇಶಿಸಿ ಇಂತಹ ಕೃತ್ಯವೆಸಗಿರುವ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಮುಖ್ಯಮಂತ್ರಿಯವರನ್ನು ಆಗ್ರಹಿಸಿದ್ದಾರೆ.

Related posts