ಪತ್ರಕರ್ತ ರವಿ ಬೆಳಗೆರೆ ವಿಧಿವಶ

ಬೆಂಗಳೂರು: ಪತ್ರಕರ್ತ ರವಿ ಬೆಳಗೆರೆ ವಿಧಿವಶರಾಗಿದ್ದಾರೆ. ನಸುಕಿನ ಜಾವ ಹೃದಯಾಘಾತಕ್ಕೊಳಗಾಗಿ ಅವರು ಕೊನೆಯುಸಿರೆಳೆದಿದ್ದಾರೆ.

ಹಲವು ದಶಕಗಳ ಕಾಲ ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ರವಿ ಬೆಳಗೆರೆ ತಮ್ಮ ವೃತ್ತಿ ಜೀವನದುದ್ದಕ್ಕೂ ಹಲವಾರು ಸವಾಲುಗಳನ್ನು ಮೆಟ್ಟಿ ಸಾಗಿ ಬಂದವರು. ಕ್ರಯಾಶೀಲ ಪತ್ರಕರ್ತರಲ್ಲೊಬ್ಬರಾಗಿದ್ದ ಅವರು ಯುವ ಪತ್ರಕರ್ತರಿಗೆ ಮಾದರಿ ಶಿಕ್ಷಕರಂತಿದ್ದರು.

ರವಿ ಬೆಳಗೆರೆ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಗಣ್ಯಣತಿಗಣ್ಯರು ಕಂಬನಿ ಮಿಡಿದಿದ್ದಾರೆ.

Related posts