ರಾಜರಾಜೇಶ್ವರಿ ನಗರ ಉಪಚುನಾವಣೆ; ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಮಪತ್ರ

ಬೆಂಗಳೂರು: ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಮುನಿರತ್ನ ಅವರು ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ.ಅಶ್ವತ್ ನಾರಾಯಣ್ ರವರು ಹಾಗೂ ಕಂದಾಯ ಮಂತ್ರಿಆರ್ ಅಶೋಕ್ ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜಿಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಅಭ್ಯರ್ಥಿ‌ ಮುನಿರತ್ನ ಅವರಿಗೆ ಬಿ.ಪಾರಂ ವಿತರಿಸಿದರು.

ಬಳಿಕ ಮುನಿರತ್ನ ಅವರು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ, ಪೀಠಾಧ್ಯಕ್ಷರಾದ ನಿರ್ಮಲಾನಂದ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ಸಚಿವರಾದ ವಿ.ಸೋಮಣ್ಣ, ಆರ್.ಅಶೋಕ, ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ, ಡಾ.ಸುಧಾಕರ್ ಉಪಸ್ಥಿತರಿದ್ದರು.

Related posts