ನಟ ಸಂಜಯ್ ದತ್ ಆಸ್ಪತ್ರೆಗೆ ದಾಖಲು

ಮುಂಬೈ: ದೇಶದಲ್ಲಿ ಕೊರೋನಾ ವೈರಾಣು ಹಾವಳಿ ಮುಂದುವರಿದಿಡಿದು ಅನೇಕ ಗಣ್ಯರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೇ ಸಂದರ್ಭದಲ್ಲಿ ಬಾಲಿವುಡ್ ಖ್ಯಾತ ನಟ ನಟ ಸಂಜಯ್ ದತ್ ಕೂಡಾ ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಾಲಾದ ಸಂಜಯ್ ದತ್ ಅವರನ್ನು ಕೋವಿಡ್ ಸೋಂಕಿನ ಬಗ್ಗೆ ಪರೀಕ್ಷೆ ನಡೆಸಲಾಗಿದೆ. ಕಡ್ಡಾಯ ಪ್ರೋಟೋಕಾಲ್ ನಂತೆ ಸಂಜಯ್ ದತ್ ಅವರಿಗೆ ಕೋವಿಡ್ -19 ಪರೀಕ್ಷೆ ನಡೆಸಲಾಗಿದ್ದು ವರದಿ ನೆಗೆಟಿವ್ ಬಂದಿದೆ. ಹೀಗಿದ್ದರೂ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Related posts