ಸಂತೋಷ್ ಆತ್ಮಹತ್ಯೆಯತ್ನ ಪ್ರಕರಣ; ಪೊಲೀಸರಿಂದ ಪ್ರಕರಣ ದಾಖಲು

ಬೆಂಗಳೂರು: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಏನ್.ಆರ್.ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ಬೆಂಗಳೂರಿನ ಸದಾಶಿವ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ಸಂತೋಷ್ ಅವರು ಶುಕ್ರವಾರ ನಿದ್ರೆ ಮಾತ್ರೆಗಳನ್ನು ಸೇವಿಸಿ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ತಕ್ಷಣ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಬಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆ ಅಧಿಕಾರಿಗಳು ಎಂಎಲ್ ಸಿ ರಿಪೋರ್ಟ್ ಕೆಳುಹಿದ್ದಾರೆನ್ನಲಾಗಿದ್ದು ಈ ವರದಿ ಆಧರಿಸಿ ಸದಾಶಿವನಗರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Related posts