ಬಿಜೆಪಿ ಸಂಸದ ಬಚ್ಚೇಗೌಡರ ಪುತ್ರ ಶರತ್ ಸಾಧ್ಯವೇ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಬಿಜೆಪಿ ಸಂಸದ ಬಚ್ಚೇಗೌಡರ ಪುತ್ರ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಯಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಗುರುವಾರ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಮತ್ತೊಮ್ಮೆ ಭೇಟಿಯಾಗಿ ನಡೆಸಿದ ಸಮಾಲೋಚನೆ ರಾಜ್ಯ ರಾಜಕೀಯದಲ್ಲಿ ಕುತೂಹಲಕಾರಿ ವಿದ್ಯಮಾನಕ್ಕೆ ಸಾಕ್ಷಿಯಾಯಿತು.

ಬಿಜೆಪಿಯಿಂದ ಹೊಸಕೋಟೆ ಉಪ ಚುನಾವಣೆಯಲ್ಲಿ ಟಿಕೆಟ್ ಸಿಗದೇ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಶಾಸಕರಾಗಿ ಶರತ್ ಬಚ್ಚೇಗೌಡ ಆಯ್ಕೆಯಾಗಿದ್ದರು.
ಇದೀಗ ಗ್ರಾಮಪಂಚಾಯತ್ ಗ್ರಾಮ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಕಾಂಗ್ರಸ್ ಬೆಂಬಲಿತ ಅಭ್ಯರ್ಥಿಗಳ ಪರ ಕೆಲಸ ಮಾಡಲು ಶರತ್ ಬಚ್ಚೇಗೌಡ ತೀರ್ಮಾನಿಸಿದ್ದಾರೆನ್ನಲಾಗಿದೆ.

ಡಿಕೆಶಿ ಭೇಟಿ ಬಳಿಕ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶರತ್ ಬಚ್ಚೇಗೌಡ, ನಾನು ಕಾಂಗ್ರೆಸ್ ಸೇರಲು ಸಿದ್ಧತೆ ನಡೆಸುತ್ತಿದ್ದೇನೆ, ಆದರೆ ಯಾವಾಗ ಕಾಂಗ್ರೆಸ್ ಸೇರುತ್ತೇನೆ ಎಂದು ಹೇಳಲಾಗದು ಎಂದು ಮಾಹಿತಿ ಹಂಚಿಕೊಂಡರು.

Related posts