ಜನಸಂಘದ ಸಂಸ್ಥಾಪಕ ಶ್ಯಾಮ ಪ್ರಸಾದ್ ಮುಖರ್ಜಿ ಜನ್ಮ ದಿನ; ನಾಯಕರಿಂದ ಗೌರವ ನಮನ

ಬೆಂಗಳೂರು: ಜನಸಂಘದ ಸಂಸ್ಥಾಪಕರಾದ ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ 119ನೇ ಜನ್ಮ ದಿನವನ್ನು ಇಂದು ಆಚರಿಸಲಾಯಿತು.

ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ ಜನ್ಮದಿನಾಚರಣೆ ಅಂಗವಾಗಿ ಬೆಂಗಳೂರಿನಲ್ಲಿರುವ ಭಾರತೀಯ ಜನತಾ ಪಕ್ಷದ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ ಭಾವಚಿತ್ರಕ್ಕೆ ಹಿರಿಯ ನಾಯಕರು ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾನಾ, ಪ್ರಧಾನ ಕಾರ್ಯದರ್ಶಿಗಳಾದ ಎನ್.ರವಿಕುಮಾರ್, ಮಹೇಶ್ ಟೆಂಗಿನಕಾಯಿ, ರಾಜ್ಯ ಕಾರ್ಯದರ್ಶಿಗಳಾದ ಜಗದೀಶ್ ಹಿರೇಮನಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts