ಪಠ್ಯಕ್ರಮ ವಿಚಾರ; ಮೋದಿ ಸರ್ಕಾರಕ್ಕೆ ಸಿದ್ದು ಗುದ್ದು

ಬೆಂಗಳೂರು: ಕೇಂದ್ರದಲ್ಲಿನ ಬಿಜೆಪಿ ಸರ್ಕಾರದ ವಿರುದ್ಧ ಆಗಾಗ್ಗೆ ಚಾಟಿ ಬೀಸುತ್ತಿರುವ ಕಾಂಗ್ರೆಸ್ ಧುರೀಣ ಸಿದ್ದರಾಮಯ್ಯ, ಇದೀಗ ಪಠ್ಯಕ್ರಮ ವಿಚಾರದಲ್ಲಿ ಮೋದಿ ಸರ್ಕಾರ ಕೈಗೊಂಡಿರುವ ತೀರ್ಮಾನ ಬಗ್ಗೆ ಆಕ್ರೋಶ ಹೊರ ಹಾಕಿದ್ದಾರೆ.

ಪೌರತ್ವ, ಜಾತ್ಯತೀತತೆ, ರಾಷ್ಟ್ರೀಯತೆ ಮತ್ತು ಫೆಡರಲಿಸಂ ಕುರಿತ ಪಾಠಗಳನ್ನು ಸಿಬಿಎಸ್ಇ ಪಠ್ಯಕ್ರಮದಲ್ಲಿ ಕೈಬಿಟ್ಟಿರುವ ಕೇಂದ್ರ ಸರ್ಕಾರವನ್ನು ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾನವ ಸಂಪನ್ಮೂಲ ಸಚಿವಾಲಯ ಕ್ರಮವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಭಾರತೀಯ ಪ್ರಜಾಪ್ರಭುತ್ವದ ಆಧಾರ ಸ್ತಂಭಗಳ ಬಗೆಗಿನ ತಿಳಿಯುವಳಿಕೆಗಳಿಂದ ಮಕ್ಕಳನ್ನು ವಂಚಿತರನ್ನಾಗಿಸಿದಂತಾಗುತ್ತದೆ ಎಂದವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Related posts