ಕೇಂದ್ರ ವಲಯ ಐಜಿಪಿಯಾಗಿ ಸೀಮಂತ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ

ಬೆಂಗಳೂರು: ಕೇಂದ್ರ ವಲಯ ಐಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅಧಿಕಾರವಹಿಸಿಕೊಂಡಿದ್ದಾರೆ.

ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಪೊಲೀಸ್ ಮಹಾ ನಿರೀಕ್ಷಕರಾಗಿದ್ದ ಸೀಮಂತ್ ಕುಮಾರ್ ಅವರನ್ನು ರಾಜ್ಯ ಸರ್ಕಾರ ಶುಕ್ರವಾರ ರಾಜ್ಯ ಕೇಂದ್ರ ವಲಯ ಐಜಿಪಿಯನ್ನಾಗಿ ವರ್ಗಾಯಿಸಿ ಆದೇಶ ಹೊರಡಿಸಿತ್ತು.

ಈವರೆಗೂ ಕೇಂದ್ರ ವಲಯ ಐಜಿಪಿಯಾಗಿದ್ದ ಶರತ್ ಚಂದ್ರ ಅವರು ಸೀಮಂತ್ ಕುಮಾರ್ ಸಿಂಗ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.  ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಕೆಜಿಎಫ್ ಜಿಲ್ಲೆಗಳನ್ನು ಹೊಂದಿರುವ ಕೇಂದ್ರ ವಲಯ ಪೊಲೀಸ್ ಮುಖ್ಯಸ್ಥರಾಗಿ ಸೀಮಂತ್ ಕುಮಾರ್ ಸಿಂಗ್ ಕಾರ್ಯನಿರ್ವಹಿಸಲಿದ್ದಾರೆ.

ಇದನ್ನೂ ಓದಿ.. ರಾಜ್ಯದ ಖಡಕ್ ಪೊಲೀಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಮೊಬೈಲ್ ನಂಬರ್ ಉತ್ತರ ಭಾರತದ ಮಂದಿಗೆ ಹೆಲ್ಪ್’ಲೈನ್..!!

 

Related posts