ಶಿರಾ ಉಪಚುನಾವಣೆ; ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್ ಗೌಡ ನಾಮಪತ್ರ

ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಖಾಡದಲ್ಲಿ ನಾಮಪತ್ರ ಸಲ್ಲಿಕೆಯ ಭರಾಟೆ ಸಾಗಿದೆ.

ಬಿಜೆಪಿ ಪಕ್ಷದ ಅಭ್ಯರ್ಥಿ ಡಾ. ರಾಜೇಶ್ ಗೌಡ ಅವರು ಉಮೇದುವಾರಿಕೆ ಸಲ್ಲಿಸುವ ಮೂಲಕ ಅಧಿಕೃತವಾಗಿ ಅಖಾಡಕ್ಕೆ ದುಮುಕಿದ್ದಾರೆ. ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಜೊತೆ ಡಾ. ರಾಜೇಶ್ ಗೌಡ ಅವರು ನಾಮಪತ್ರ ಸಲ್ಲಿಸಿದರು.

ಸಂದರ್ಭದಲ್ಲಿ ಸಂಸದರಾದ ಶ್ರೀ ಎ.ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಶ್ರೀ ಸುರೇಶ್ ಗೌಡ, ಮುಖಂಡರಾದ ಶ್ರೀ ಎಸ್.ಆರ್. ಗೌಡ, ಎಸ್ ಸಿ ಮೋರ್ಚಾದ ಜಿಲ್ಲಾಧ್ಯಕ್ಷರಾದ ಶ್ರೀ ಹುಚ್ಚಯ್ಯ ಮತ್ತಿತರರು ಉಪಸ್ಥಿತರಿದ್ದರು.

Related posts