ಕೌಶಲ್ಯಾಭಿವೃದ್ಧಿಗೆ ಸಂಕಲ್ಪ ಹೆಲ್ಪ್‌ಲೈನ್‌; ಚಾಲನೆ ನೀಡಿದ ಡಿಸಿಎಂ

ಬೆಂಗಳೂರು: ದೇಶದಲ್ಲಿ ಇದೇ ಮೊದಲ ಬಾರಿಗೆ ಅನುಷ್ಠಾನಕ್ಕೆ ತಂದಿರುವ ಕೌಶಲ್ಯ ತರಬೇತಿ ಮಾಹಿತಿ ನೀಡುವ ʼಸಂಕಲ್ಪʼ ಸಹಾಯವಾಣಿಗೆ ಕೌಶಲ್ಯಾಭಿವೃದ್ಧಿ ಮತ್ತು ಗ್ರಾಮೀಣ ಜೀವನೋಪಾಯ ಇಲಾಖೆಯ ಸಚಿವರು ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಚಾಲನೆ ನೀಡಿದರು.

ರಾಜ್ಯದ ಎಲ್ಲ ಯುವಜನರಿಗೆ ವರದಾನವಾಗಬಲ್ಲ, ಅವರನ್ನು ಸಾಮಾಜಿಕ ಮತ್ತು ಆರ್ಥಿಕವಾಗಿ ಸಬಲೀಕರಣ ಮಾಡುವ ಉದ್ದೇಶದಿಂದ ಈ ಸಹಾಯವಾಣಿಯನ್ನು ರೂಪಿಸಲಾಗಿದ್ದು, ಡಿಸಿಎಂ ಅವರು ಸಹಾಯವಾಣಿ ಕೇಂದ್ರಕ್ಕೆ ಕರೆ ಮಾಡಿ ಕೊಡಗು ಜಿಲ್ಲೆಯಲ್ಲಿನ ತರಬೇತಿ ಕೇಂದ್ರಗಳ ಬಗ್ಗೆ ಮಾಹಿತಿ ಪಡೆಯುವುದರ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಗ್ರಾಮೀಣ ಯುವಜನರಿಗೆ ಈ ಯೋಜನೆಯನ್ನು ಸದುಪಯೋಗ ಮಾಡಿಕೊಳ್ಳಬೇಕು. ಕೌಶಲ್ಯಾಭಿವೃದ್ಧಿಗೆ ಹೆಚ್ಚು ಒತ್ತು ನೀಡಬೇಕು ಎಂದ ಡಿಸಿಎಂ, 080-24482558 ಸಂಖ್ಯೆಗೆ ಕರೆ ಮಾಡುವಂತೆ ತಿಳಿಸಿದರು.

Related posts