ಪರಿಷತ್ ಫೈಟ್’ನಿಂದ ಬೇಸತ್ತಿದ್ದ ಉಪಸಭಾಪತಿ ಧರ್ಮೇಗೌಡ ಇನ್ನಿಲ್ಲ

ಚಿಕ್ಕಮಗಳೂರು: ವಿಧಾನಪರಿಷತ್ ಉಪಸಭಾಪತಿ ಹಾಗೂ ಜೆಡಿಎಸ್ ಸದಸ್ಯ ಎಸ್.ಎಲ್. ಧರ್ಮೇಗೌಡ ವಿಧಿವಶರಾಗಿದ್ದಾರೆ. ಸೋಮವಾರ ರಾತ್ರಿ ಅವರ ಮೃತದೇಹ ಕಡೂರು ತಾಲೂಕು ಬಳಿ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ರೈಲ್ವೆ ಹಳಿಯಲ್ಲಿ ಅವರ ರುಂಡ ಮುಂಡ ಬೇರ್ಪಟ್ಟ ದೇಹ ಪತ್ತೆಯಾಗಿದ್ದು, ಅವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಹೇಳಲಾಗುತ್ತಿದೆ.

ಇತ್ತೀಚೆಗೆ ವಿಧಾನಪರಿಷತ್​ನಲ್ಲಿ ನಡೆದ ಘಟನೆಯಿಂದ ಬೇಸತ್ತು ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದೇ ಎಂಬ ಅನುಮಾನ ಕಾಡತೊಡಗಿದೆ.

ಸೋಮವಾರ ಸಂಜೆ 6:30ಕ್ಕೆ ಸಖರಾಯಪಟ್ಟಣದಿಂದ ಖಾಸಗಿ ಡ್ರೈವರ್ ಜೊತೆ ಕಾರಿನಲ್ಲಿ ಹೊರಟ ಎಸ್.ಎಲ್. ಧರ್ಮೇಗೌಡ ಅವರು ಕಡೂರು ಸಮೀಪದ ಗುಣಸಾಗರ ಬಳಿ ಕಾರಿನಿಂದ ಇಳಿದು ಒಬ್ಬ ವ್ಯಕ್ತಿ ಜೊತೆ ಸ್ವಲ್ಪ ಕೆಲಸ ಇದೆ ಎಂದು ಹೇಳಿ ಹೋದರೆನ್ನಲಾಗಿದೆ. ನಂತರ ಕಡೂರಿನ ವ್ಯಕ್ತಿಯೊಬ್ಬರಿಗೆ ಕರೆ ಮಾಡಿ ಶತಾಬ್ದಿ ಎಕ್ಸ್​ಪ್ರೆಸ್ ಬರುವ ಸಮಯ ವಿಚಾರಿಸಿದರೆನ್ನಲಾಗಿದೆ. ಅದಾದ ಸ್ವಲ್ಪ ಹೊತ್ತಿನಲ್ಲಿ ಅವರು ಶವವಾಗಿ ಪತ್ತೆಯಾಗಿದ್ದಾರೆ.

Related posts