ರಸ್ತೆ ಅಪಘಾತ; ಕೇಂದ್ರ ಸಚಿವ ಶ್ರೀಪಾದ ನಾಯಕ್ ಪತ್ನಿ ನಿಧನಕ್ಕೆ ಸಚಿವರ ಶೋಕ.

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಳಿ ನಡೆದ ರಸ್ತೆ ಅಪಘಾತದಲ್ಲಿ ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್ ಅವರ ಪತ್ನಿ ವಿಜಯಾ ನಾಯಕ್ ಅವರ ಮೃತಪಟ್ಟಿದ್ದು, ಅವರ ನಿಧಾನಕ್ಕೆ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ‌ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ವಿಜಯಾ ನಾಯಕ್ ಅವರ ಸಾವು ಅತ್ಯಂತ ದುರದೃಷ್ಟಕರ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಶೋಕವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ ನೀಡಲೆಂದು ಸಚಿವರು ಪ್ರಾರ್ಥಿಸಿದ್ದಾರೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಅವರು ಶೀಘ್ರ ಗುಣಮುಖರಾಗಲಿ ಎಂದು ರಮೇಶ್ ಜಾರಕಿಹೊಳಿ‌ ಪ್ರಾರ್ಥಿಸಿದ್ದಾರೆ.

Related posts