ಪ್ರಶ್ನೆ ಪತ್ರಿಕೆಬಹಿರಂಗ ಹಿನ್ನೆಲೆ; ಅಂತಿಮ ಪರೀಕ್ಷೆಯಲ್ಲಿ ಬಿಗಿ ಕ್ರಮ

ಬೆಂಗಳೂರು: ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ‌ ಪರೀಕ್ಷಾ ಪ್ರಶ್ನೆ ಪತ್ರಿಕೆಬಹಿರಂಗ ಹಿನ್ನೆಲೆಯಲ್ಲಿ ಮುಂಬರುವ ಅಂತಿಮ ಪರೀಕ್ಷೆಯಲ್ಲಿ ಅಕ್ರಮ ನಡೆಯದಂತೆ ಪರೀಕ್ಷಾ ಮಂಡಳಿ ಸಂಪೂರ್ಣ ಸಿದ್ಧತೆ ಕೈಗೊಂಡಿದೆ. ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ‌ ಪರೀಕ್ಷಾ ಪ್ರಶ್ನೆ ಪತ್ರಿಕೆ ಬಹಿರಂಗ ಸುದ್ದಿಯನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಅಂತಿಮ ಪರೀಕ್ಷೆಯಲ್ಲಿ ಯಾವ ಗೊಂದಲಕ್ಕೆ, ಆತಂಕಕ್ಕೆ ಅವಕಾಶ ನೀಡಬಾರದೆಂದು ಅಧಿಕಾರಿಗಳಿಗೆ ಕಟ್ಟಪ್ಪಣೆ ಮಾಡಿದ್ದಾರೆ.

ಈ ಕುರಿತಂತೆ ಮಾಧ್ಯಮಗಳಿಗೆ ವಿವರ ಒದಗಿಸಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ರಾಜ್ಯದಲ್ಲಿ ಎರಡೂವರೆ ಸಾವಿರ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಸಂಪೂರ್ಣ ವಿಭಿನ್ನವಾಗಿ‌, ಅತ್ಯಂತ ಸುರಕ್ಷಿತವಾಗಿ ನಡೆಸಲಾಗುತ್ತದೆ ಎಂದು ವಿವರಿಸಿದರು.

ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷಾ ವ್ಯವಸ್ಥೆ ಪೂರ್ವ ಸಿದ್ಧತಾ‌ ಪರೀಕ್ಷಾರೀತಿಯಲ್ಲಿ ಅಲ್ಲ. ಅದು ಬೇರೆಯೇ‌ ಆಯಾಮವನ್ನು ಹೊಂದಿರುತ್ತದೆ. ಅಂತಿಮ ಪರೀಕ್ಷೆಯಲ್ಲಿ ಯಾವ ಗೊಂದಲ, ಆತಂಕಕ್ಕೆ ಅವಕಾಶವೇ ಇರುವುದಿಲ್ಲ ಎಂದು ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ.

Related posts